ಉಪಕರಣಇತರ ಭಾಷೆಗಳು
|
ಮೀಟರ್ಮೀಟರ್ ಎಂಬುದು ಅಂತರರಾಷ್ಟ್ರೀಯ ಮಾಪನ ಪ್ರಮಾಣ ಪದ್ಧತಿಯಲ್ಲಿ (en:SI units) ಉದ್ದದ ಅಳತೆಯ ಮೂಲ ಪ್ರಮಾಣ. ಐತಿಹಾಸಿಕವಾಗಿ ಇದು ಭೂಮಿಯ ಸಮಭಾಜಕ ವೃತ್ತದಿಂದ ಉತ್ತರ ಧ್ರುವದ ವರೆಗಿನ ದೂರದ ೧೦ ಮಿಲಿಯನ್ರ ಒಂದು ಭಾಗವಾಗಿ ನಿರ್ಧಾರಿತವಾಯಿತು. ಈ ಅಳತೆಯನ್ನು ಫ್ರಾನ್ಸ್ನ ವಿಜ್ಞಾನ ಪರಿಷತ್ತಿನಲ್ಲಿ ಒಂದು ಪ್ಲಾಟಿನಮ್-ಇರಿಡಿಯಮ್ ಲೋಹದ ಪಟ್ಟಿಯ ಮೇಲೆ ಎರಡು ಗೆರೆಗಳಿಂದ ಸೂಚಿತವಾಗಿತ್ತು. ಈಗ ತೂಕ ಮತ್ತು ಅಳತೆಗಳ ಅಂತರರಾಷ್ಟ್ರೀಯ ಪ್ರಾಧಿಕಾರವು ಈ ಅಳತೆಯನ್ನು ಬೆಳಕು ಒಂದು ಕ್ಷಣದ ೨೯೯,೭೯೨,೪೫೮ನೇ ಭಾಗದಲ್ಲಿ ಚಲಿಸುವ ದೂರವಾಗಿ ನಿರ್ದಿಷ್ಟ ಮಾಡಿದೆ. [ಬದಲಾಯಿಸಿ] SI ಪದ್ಧತಿಯಲ್ಲಿ ಮೀಟರ್ ಆಧಾರಿತ ಇತರ ಮಾಪನಗಳುSI ಪದ್ಧತಿಯ ಪ್ರಕಾರ ಮೂಲ ಮಾಪನಗಳ ದಶಕಾಂಶಗಳನ್ನು ಇತರ ಮಾಪನಗಳಾಗಿ ಉಪಯೋಗಿಸಲ್ಪಡುತ್ತವೆ. ಈ ರೀತಿಯ ಮಾಪನಗಳ ಪಟ್ಟಿ ಕೆಳಗಿದೆ. ಪ್ರಮುಖ ಮಾಪನಗಳನ್ನು ದಪ್ಪ ಅಕ್ಷರಗಳಲ್ಲಿ ನಮೂದಿಸಲಾಗಿದೆ.[೧]
|